ಬಂಟ್ವಾಳ, ಜನವರಿ 24, 2024 (ಕರಾವಳಿ ಟೈಮ್ಸ್) : ಶಿಥಿಲಗೊಂಡು ಘನ ವಾಹನ ಸಂಚಾರಕ್ಕೆ ನಿಷೇಧ ಹೇರಲ್ಪಟ್ಟಿರುವ ಪೆÇಳಲಿ ಸಮೀಪದ ಅಡ್ಡೂರು ಸೇತುವೆ ಕಾಮಗಾರಿಗೆ ಶುಕ್ರವಾರ ಚಾಲನೆ ದೊರೆತಿದೆ. ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಹಾಗೂ ಸೇತುವೆ ಕಾಮಗಾರಿಯ ಗುತ್ತಿಗೆದಾರ ಮೊಗರೋಡಿ ಕನ್ಸ್ಟ್ರಕ್ಷನ್ ಇದರ ಸುಧಾಕರ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಪೆÇಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಸೇತುವೆ ದುರಸ್ಥಿಗೆ ಈಗಾಗಲೇ ಸರಕಾರದಿಂದ 6 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿತ್ತು.
ಪೆÇಳಲಿ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಮೊದಲು ದುರಸ್ತಿ ಕಾರ್ಯವನ್ನು ಮುಗಿಸಿ ಭಕ್ತರಿಗೆ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಗುತ್ತಿಗೆದಾರರಿಗೆ ಇದೇ ವೇಳೆ ಶಾಸಕ ರಾಜೇಶ್ ನಾಯ್ಕ್ ಸೂಚಿಸಿದರು.
ಪೆÇಳಲಿ ಅಡ್ಡೂರು ಸೇತುವೆ ದುರಸ್ತಿ ಕಾರ್ಯಕ್ಕಾಗಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದರು ಈವರೆಗೆ ಕಾಮಗಾರಿ ಕೈಗೆತ್ತಿಕೊಳ್ಳದಿರುವ ಬಗ್ಗೆ ಬೆಂಗಳೂರು ವಿಧಾನಸೌಧದಲ್ಲಿ ಇತ್ತೀಚೆಗೆ ನಡೆದ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಭರವಸೆಗಳ ಸಮಿತಿ ಸಭೆಯಲ್ಲಿ ಶಾಸಕ ರಾಜೇಶ್ ನಾಯಕ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದರಲ್ಲದೆ ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿದ್ದರು.
0 comments:
Post a Comment