ಕೋವಿಡ್ ಬಳಿಕ ಕಂಡು ಬರುತ್ತಿರುವ ಹಠಾತ್ ಸಾವುಗಳ ಬಗ್ಗೆ ಅಧ್ಯಯನ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ - Karavali Times ಕೋವಿಡ್ ಬಳಿಕ ಕಂಡು ಬರುತ್ತಿರುವ ಹಠಾತ್ ಸಾವುಗಳ ಬಗ್ಗೆ ಅಧ್ಯಯನ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ - Karavali Times

728x90

7 February 2025

ಕೋವಿಡ್ ಬಳಿಕ ಕಂಡು ಬರುತ್ತಿರುವ ಹಠಾತ್ ಸಾವುಗಳ ಬಗ್ಗೆ ಅಧ್ಯಯನ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 07, 2025 (ಕರಾವಳಿ ಟೈಮ್ಸ್) : ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಕೊರೋನಾ ಕಾಲದ ನಂತರದಿಂದ ಎಳೆಯ ವಯಸ್ಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರ ಈ ಸಮಸ್ಯೆಯ ಮೂಲ ಪತ್ತೆಮಾಡಿ, ಪರಿಹರಿಸಬೇಕು ಎನ್ನುವುದು ನನ್ನ ಯೋಚನೆಯೂ ಆಗಿತ್ತು. ಇಂತಹ ಸಂದರ್ಭದಲ್ಲಿ ಈ ಸಮಸ್ಯೆಯ ಬಗ್ಗೆ ಗಮನ ಸೆಳೆದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ನನ್ನ ಯೋಚನೆಯನ್ನು ಕಾರ್ಯರೂಪಕ್ಕೆ ತರಲು ಪ್ರೇರಣೆಯಾಯಿತು. ಅವರಿಗೆ ಕೃತಜ್ಞತೆಗಳು. ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕೋವಿಡ್ ಬಳಿಕ ಕಂಡು ಬರುತ್ತಿರುವ ಹಠಾತ್ ಸಾವುಗಳ ಬಗ್ಗೆ ಅಧ್ಯಯನ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ Rating: 5 Reviewed By: karavali Times
Scroll to Top