ಬಂಟ್ವಾಳ, ಫೆಬ್ರವರಿ 03, 2025 (ಕರಾವಳಿ ಟೈಮ್ಸ್) : ಸಾರ್ವಜನಿಕ ಕುಂದು ಕೊರತೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಫೆಬ್ರವರಿ 5 ರಂದು ಬುಧವಾರ ಬೆಳಿಗ್ಗೆ 10 ಗಂಟೆಗೆ ಬಿ ಸಿ ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿಗಳು ಹಾಗೂ ಇತರ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದು, ಸಾರ್ವಜನಿಕರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸದುಪಯೋಗಪಡೆದುಕೊಳ್ಳುವಂತೆ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment