ಬಂಟ್ವಾಳ, ಫೆಬ್ರವರಿ 11, 2025 (ಕರಾವಳಿ ಟೈಮ್ಸ್) : ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಆಡಳಿತ ಸಮಿತಿಯ ನವೀಕೃತ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ನೂತನ ಕಛೇರಿಯನ್ನು ಇರ್ಷಾದ್ ದಾರಿಮಿ ಅಲ್ ಜಝರಿ ಮಿತ್ತಬೈಲ್ ಉದ್ಘಾಟಿಸಿದರು. ಮಸೀದಿ ಅಧ್ಯಕ್ಷ ಅಬ್ದುಲ್ಲಾ ಹಾಜಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕಲ್ಲಡ್ಕ ಜುಮಾ ಮಸೀದಿ ಖತೀಬ್ ಉಸ್ಮಾನ್ ದಾರಿಮಿ, ಮುಜವ್ವಿದರಾದ ರಿಯಾಝ್ ಮೌಲವಿ ಕಾಸರಗೋಡು ಭಾಗವಹಿಸಿದ್ದರು.
ಅಬೂಬಕ್ಕರ್ ಸಿದ್ದೀಕ್ ಪನಾಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಲ್ಲಡ್ಕ ಮುನೀರುಲ್ ಇಸ್ಲಾಂ ಮದ್ರಸದ ಸದರ್ ಉಸ್ತಾದ್ ಅಬ್ದುಲ್ ಲತೀಫ್ ದಾರಿಮಿ ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment