ಬಂಟ್ವಾಳ, ಫೆಬ್ರವರಿ 26, 2025 (ಕರಾವಳಿ ಟೈಮ್ಸ್) : ಬಿ ಸಿ ರೋಡು ಸಮೀಪದ ಮಿತ್ತಬೈಲು ಮುಹಿಯುದ್ದೀನ್ ಜುಮಾ ಮಸೀದಿ ಮಾಜಿ ಅಧ್ಯಕ್ಷ, ಶಾಂತಿಅಂಗಡಿ ನಿವಾಸಿ ಎಸ್ ಎಂ ಮುಹಮ್ಮದ್ ಅಲಿ ಶಾಂತಿಂಗಡಿ (69) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಂಟ್ವಾಳ ತಾಲೂಕು ಜಮೀಯ್ಯತುಲ್ ಫಲಾಹ್ ಸಹಿತ ವಿವಿಧ ಧಾರ್ಮಿಕ, ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ಇವರು ಸಮಾಜಮುಖಿ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ ಸಹಿತ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.
0 comments:
Post a Comment