ಬಂಟ್ವಾಳ, ಫೆಬ್ರವರಿ 19, 2025 (ಕರಾವಳಿ ಟೈಮ್ಸ್) : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ಇಲ್ಲಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಬುಧವಾರ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ಕಚೇರಿ ಕೇಂದ್ರ ಸ್ಥಾನೀಯ ಉಪ ತಹಶೀಲ್ದಾರ್ ನರೇಂದ್ರನಾಥ್ ಮಿತ್ತೂರು ಮಾತನಾಡಿ, ದೇಶಪ್ರೇಮ, ಪರಾಕ್ರಮ, ಚಾಣಾಕ್ಷತೆಗಳಿಂದ ಇತಿಹಾಸದಲ್ಲಿ ತನ್ನದೇ ಆದ ಛಾಪು ಮೂಡಿಸಿದವರು ಶಿವಾಜಿ ಮಹಾರಾಜರು. ತಾಯಿ ಮತ್ತು ಗುರುಗಳ ಮಾರ್ಗದರ್ಶನದಿಂದ ಪರಾಕ್ರಮಿಯಾಗಿ ಬೆಳೆದು ಇಂದಿಗೂ ಜನಮಾನಸದಲ್ಲಿ ನೆಲೆನಿಂತ ಇವರ ಕಥಾನಕವು ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.
ಈ ಸಂದರ್ಭ ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕ ವಿಜಯ್ ಆರ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.
0 comments:
Post a Comment