ಮಂಗಳೂರು : ಫೆಬ್ರವರಿ 18 ರಂದು ನೆಹರು ವಿಚಾರ ವೇದಿಕೆಯಿಂದ ‘ಗಾಂಧಿ-ಅಂಬೇಡ್ಕರ್-ನೆಹರು’ ವಿಚಾರಗೋಷ್ಠಿ - Karavali Times ಮಂಗಳೂರು : ಫೆಬ್ರವರಿ 18 ರಂದು ನೆಹರು ವಿಚಾರ ವೇದಿಕೆಯಿಂದ ‘ಗಾಂಧಿ-ಅಂಬೇಡ್ಕರ್-ನೆಹರು’ ವಿಚಾರಗೋಷ್ಠಿ - Karavali Times

728x90

15 February 2025

ಮಂಗಳೂರು : ಫೆಬ್ರವರಿ 18 ರಂದು ನೆಹರು ವಿಚಾರ ವೇದಿಕೆಯಿಂದ ‘ಗಾಂಧಿ-ಅಂಬೇಡ್ಕರ್-ನೆಹರು’ ವಿಚಾರಗೋಷ್ಠಿ

 ಮಂಗಳೂರು, ಫೆಬ್ರವರಿ 15, 2025 (ಕರಾವಳಿ ಟೈಮ್ಸ್) : ಮಂಗಳೂರು  ನೆಹರೂ ವಿಚಾರ ವೇದಿಕೆ ವತಿಯಿಂದ ಮಹಾತ್ಮ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಜವಾಹರ‌ಲಾಲ್ ನೆಹರು ಅವರ ಕುರಿತಾಗಿ ‘ಸ್ವಾತಂತ್ರ್ಯ-ಸಂವಿಧಾನ-ದೂರದೃಷ್ಟಿ’ ವಿಷಯದಲ್ಲಿ ವಿಚಾರಗೋಷ್ಠಿ ಫೆಬ್ರವರಿ 18 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಉರ್ವ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

 ರಾಜ್ಯ ಲೋಕೋಪಯೋಗಿ ಇಲಾಖಾ ಸಚಿವ ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಸಚಿವ ಬಿ ರಮಾನಾಥ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಕೆಪಿಸಿಸಿ ವಕ್ತಾರ ಮುನೀರ್ ಜನ್ಸಾಲೆ ವಿಷಯ ಮಂಡಿಸಲಿದ್ದಾರೆ. ‘ಗಾಂಧಿ ಮತ್ತು ಸ್ವಾತಂತ್ರ್ಯ’ ವಿಷಯದ ಕುರಿತು ಸುಪ್ರೀಂ ಕೋರ್ಟ್ ಹಿರಿಯ ವಕೀಲ ಬ್ರಿಜೇಶ್ ಕಾಳಪ್ಪ, ‘ಅಂಬೇಡ್ಕರ್ ಮತ್ತು ಸಂವಿಧಾನ’ ವಿಷಯದ ಕುರಿತು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹಾಗೂ ‘ನೆಹರು ಮತ್ತು ದೂರದೃಷ್ಟಿ’ ವಿಷಯದ ಕುರಿತು ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರು ವಿಚಾರ ಮಂಡಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯಚಂದ್ರ ಜೈನ್,  ಶಾಸಕರಾದ ಅಶೋಕ್ ಕುಮಾರ್ ರೈ, ಐವನ್ ಡಿಸೋಜ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂದೀಪ್ ಬಿ.ಎಂ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ರಾಜ್ಯ ಅಲೈಡ್ ಮತ್ತು ಹೆಲ್ತ್ ಕೇರ್ ಅಧ್ಯಕ್ಷ ಡಾ ಯು.ಟಿ. ಇಫ್ತಿಕಾರ್, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಬೆಂಗಳೂರು ಮಾನವ ಬಂಧುತ್ವ ವೇದಿಕೆಯ ಸಂಚಾಲಕ ಅನಂತ ನಾಯ್ಕ, ದ.ಕ. ಜಿಲ್ಲಾ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಕೆಪಿಸಿಸಿ ಕಾರ್ಯದರ್ಶಿ ಪದ್ಮರಾಜ್‌ ಆರ್, ಮುಖ್ಯಮಂತ್ರಿ ಪ್ರಶಸ್ತಿ ವಿಜೇತ ಕಾರ್ಮಿಕ ಮುಖಂಡ ನಾಪಂಡ ಮುತ್ತಪ್ಪ ಬೆಂಗಳೂರು, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಲಾ ಶೆಟ್ಟಿ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ, ಮಿಥುನ್ ರೈ, ರಕ್ಷಿತ್ ಶಿವರಾಂ, ಮ.ನ.ಪಾ ವಿಪಕ್ಷ ನಾಯಕ ಅನಿಲ್ ಕುಮಾರ್, ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಘಟಕದ ಅಧ್ಯಕ್ಷ ದಿನೇಶ್ ಮುಳೂರು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಬಿ. ವಿಶ್ವನಾಥ್ ರೈ, ಮಾನವ ಬಂಧುತ್ವ ವೇದಿಕೆಯ ದ.ಕ. ಜಿಲ್ಲಾ ಪ್ರಧಾನ ಸಂಚಾಲಕ ಜಯರಾಮ್ ಪೂಜಾರಿ, ಕೊಡಗು ಜಿಲ್ಲೆಯ ಪ್ರಧಾನ ಸಂಚಾಲಕ ಜನಾರ್ಧನ ಕೆ.ಎಲ್, ಬಂಟ್ವಾಳ ತಾಲೂಕಿನ ಪ್ರಧಾನ ಸಂಚಾಲಕ ಕೇಶವ ಪೂಜಾರಿ ಪಂಜಿಕಲ್ಲು ಹಾಗೂ ಬಂಟ್ವಾಳ ತಾಲೂಕು ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಮೋಹನ್ ಶೆಟ್ಟಿ ಪಂಜಿಕಲ್ಲು ಅವರು ಭಾಗವಹಿಸಲಿದ್ದಾರೆ ಎಂದು ನೆಹರೂ ವಿಚಾರ ವೇದಿಕೆಯ ಮುಖ್ಯಸ್ಥ ನವೀನ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು : ಫೆಬ್ರವರಿ 18 ರಂದು ನೆಹರು ವಿಚಾರ ವೇದಿಕೆಯಿಂದ ‘ಗಾಂಧಿ-ಅಂಬೇಡ್ಕರ್-ನೆಹರು’ ವಿಚಾರಗೋಷ್ಠಿ Rating: 5 Reviewed By: lk
Scroll to Top