ಬಂಟ್ವಾಳ, ಫೆಬ್ರವರಿ 18, 2025 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ವಕ್ಫ್ ಹಾಗೂ ಅಲ್ಪ ಸಂಖ್ಯಾತ ಇಲಾಖಾ ಸೌಲಭ್ಯಗಳ ಬಗ್ಗೆ ಮಾಹಿತಿ ಶಿಬಿರ ಹಾಗೂ ಸಂವಾದ ಕಾರ್ಯಕ್ರಮ ಫೆ 21 ರಂದು ಶುಕ್ರವಾರ ಅಪರಾಹ್ನ 2.30 ಗಂಟೆಗೆ ಬಿ ಸಿ ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.
ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಂಟ್ವಾಳ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಅಧ್ಯಕ್ಷತೆ ವಹಿಸುವರು. ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಮುಜೀಬುಲ್ಲಾ ಜಫಾರಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು. ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕ್ಕರ್ ಉಪಸ್ಥಿತರಿರುವರು.
ಇದೇ ವೇಳೆ ಸಂಯುಕ್ತ ಜಮಾಅತ್ ವತಿಯಿಂದ ನಿರಂತರ ನೆರವು ಸ್ವೀಕರಿಸುತ್ತಿರುವ ಕಿಡ್ನಿ ರೋಗಿಗಳಿಗೆ ಚೆಕ್ ಹಸ್ತಾಂತರ ಹಾಗೂ ಕಿಟ್ ವಿತರಣೆ ನಡೆಯಲಿದೆ. ಮಂಗಳ ಕಿಡ್ನಿ ಫೌಂಡೇಶನ್ ನಿರ್ದೇಶಕ ಡಾ ಮೊಯಿದಿನ್ ನಫ್ಸೀರ್ ಅವರಿಂದ ವೈದ್ಯಕೀಯ ಮಾರ್ಗದರ್ಶನ ಕಾರ್ಯಕ್ರಮ ಹಾಗೂ ಕಿಡ್ನಿ ಸುರಕ್ಷತೆ ಬಗ್ಗೆ ವೈದ್ಯಕೀಯ ಸಲಹೆ ಕಾರ್ಯಕ್ರಮ ನಡೆಯಲಿದ್ದು, ತಾಲೂಕಿನ ಎಲ್ಲಾ ಮಸೀದಿಗಳ ಆಡಳಿತ ಸಮಿತಿ ಪದಾಧಿಕಾರಿಗಳು ಹಾಗೂ ಖತೀಬರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಸಂಯುಕ್ತ ಜಮಾಅತ್ ಪ್ರಕಟಣೆ ತಿಳಿಸಿದೆ.
0 comments:
Post a Comment