ಬಿ.ಸಿ.ರೋಡು : ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರಿಂದ ಪ್ರತಿಭಟನೆ - Karavali Times ಬಿ.ಸಿ.ರೋಡು : ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರಿಂದ ಪ್ರತಿಭಟನೆ - Karavali Times

728x90

4 March 2025

ಬಿ.ಸಿ.ರೋಡು : ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರಿಂದ ಪ್ರತಿಭಟನೆ

ಬಂಟ್ವಾಳ, ಮಾರ್ಚ್ 04, 2025 (ಕರಾವಳಿ ಟೈಮ್ಸ್) : ಅಕ್ಷರ ದಾಸೋಹ ನೌಕರರಿಗೆ ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ 6 ಸಾವಿರ ರೂಪಾಯಿ ವೇತನ ಹೆಚ್ಚಳ ಸಹಿತ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಅಕ್ಷರ ದಾಸೋಹ ನೌಕರರ ಸಂಘ (ಎಐಸಿಸಿಟಿಯು) ವತಿಯಿಂದ ಬಿ ಸಿ ರೋಡಿನ ಮಿನಿವಿಧಾನಸೌಧ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿ ತಾಲೂಕು ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಎಐಸಿಸಿಟಿಯು ದಕ್ಷಿಣ ಕನ್ನಡ ಜಿಲ್ಲಾದ್ಯಕ್ಷ ರಾಮಣ್ಣ ವಿಟ್ಲ ಅವರು, ನಮ್ಮ ದೇಶದ ಅಭಿವೃದ್ಧಿಗೆ ಶಿಕ್ಷಣ, ಆರೋಗ್ಯ, ಉದ್ಯೋಗ ಹಾಗೂ ಆಹಾರ ಪೂರೈಸಲು ಬೇಕಾದ ಸಂಪನ್ಮೂಲವನ್ನು ಕೇಂದ್ರ ಸರ್ಕಾರವು ಸಂಪೂರ್ಣವಾಗಿ ಕಡೆಗಣಿಸಿದ್ದು, ದೇಶದ ದುಡಿಯುವ ಜನ ವಿಭಾಗದ ಬಿಸಿಯೂಟ ಯೋಜನೆಯನ್ನು ಕೇಂದ್ರ ಸರ್ಕಾರವು 2010 ರಿಂದ ಕಡೆಗಣಿಸುತ್ತಲೇ ಬಂದಿದೆ. ರಾಜ್ಯದಲ್ಲಿ ಕೆಲಸದ ಒತ್ತಡ ಹೆಚ್ಚಳವಾಗಿದೆ. ಆದರೆ ಕೆಲಸಕ್ಕೆ ತಕ್ಕ ವೇತನ ಮಾತ್ರ ಸಿಗದೇ ನೌಕರರು ಸಂಕಷ್ಟದ ಪರಿಸ್ಥಿತಿಯಲ್ಲಿ ನರಳುವಂತೆ ಮಾಡಿದೆ. ಬಿಸಿಯೂಟ ನೌಕರರಿಗೆ ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ 6 ಸಾವಿರ ರೂಪಾಯಿ ವೇತನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.

ಎಐಸಿಸಿಟಿಯು ರಾಜ್ಯ ಸಮಿತಿ ಗೌರವಾದ್ಯಕ್ಷ ಕಾಮ್ರೆಡ್ ಮೋಹನ್ ಕೆಇ, ತಾಲೂಕು ಮುಖಂಡರಾದ ಕಾಮ್ರೇಡ್ ರಾಜಾ ಚೆಂಡ್ತಿಮಾರ್, ಕಾಮ್ರೇಡ್ ಸಜೇಶ್ ವಿಟ್ಲ, ಕಾಮ್ರೇಡ್ ಸುಲೈಮಾನ್ ಕೆಲಿಂಜ, ಅಕ್ಷರ ದಾಸೋಹ ಸಂಘಟನೆಯ ತಾಲೂಕು ಅದ್ಯಕ್ಷೆ ಜಯಶ್ರೀ ಆರ್ ಕೆ, ಕಾರ್ಯದರ್ಶಿ ವಾಣಿಶ್ರೀ ಕನ್ಯಾನ, ಉಪಾದ್ಯಕ್ಷರುಗಳಾದ ವಿನಯ ನಡುಮೊಗರು, ಸೇವಂತಿ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಬಿ.ಸಿ.ರೋಡು : ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರಿಂದ ಪ್ರತಿಭಟನೆ Rating: 5 Reviewed By: karavali Times
Scroll to Top