ಬಂಟ್ವಾಳ, ಮಾರ್ಚ್ 22, 2025 (ಕರಾವಳಿ ಟೈಮ್ಸ್) : ಅಟೋ ರಿಕ್ಷಾವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಡಗಕಜೆಕಾರು ಗ್ರಾಮದ ಕೋಮಿನಡ್ಡ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.
ಗಾಯಗೊಂಡ ಸ್ಕೂಟರ್ ಸವಾರನನ್ನು ಫಾರೂಕ್ ಎಂದು ಹೆಸರಿಸಲಾಗಿದೆ. ತೆಂಕಕಜೆಕಾರು ಗ್ರಾಮದ ನಿವಾಸಿ ದೀಪಕ್ ಕೆ ಎಂಬವರು ಶುಕ್ರವಾರ ಮಧ್ಯಾಹ್ನ ಸುಮಾರು 2.30ರ ವೇಳೆಗೆ ತನ್ನ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೋಮಿನಡ್ಕ ಎಂಬಲ್ಲಿ ಅಟೋ ರಿಕ್ಷಾವೊಂದನ್ನು ಓವರ್ ಟೇಕ್ ಮಾಡಿಕೊಂಡು ಬಂದ ಸ್ಕೂಟರ್ ಸವಾರ ಫಾರೂಕ್ ಅವರು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳು ಫಾರೂಕ್ ಅವರನ್ನು ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment