ಬಂಟ್ವಾಳ, ಮಾರ್ಚ್ 05, 2025 (ಕರಾವಳಿ ಟೈಮ್ಸ್) : ತಾಲೂಕಿನ ಪುದು ಗ್ರಾಮದ ಫರಂಗಿಪೇಟೆ ಸಮೀಪದ ಅಮೆಮಾರು ಎಂಬಲ್ಲಿನ ನಿವಾಸಿ, ಮಂಗಳೂರು ಖಾಸಗಿ ಪಿಯು ಕಾಲೇಜು ವಿದ್ಯಾರ್ಥಿ ದಿಗಂತ್ (17) ಎಂಬಾತನ ನಾಪತ್ತೆ ಪ್ರಕರಣದ ಬಗ್ಗೆ ಬುಧವಾರ ವಿಧಾನಸಭೆಯಲ್ಲಿ ವಿಧಾನಸಭಾ ಸ್ಪೀಕರ್, ಕ್ಷೇತ್ರದ ಶಾಸಕ ಯು ಟಿ ಖಾದರ್ ಪ್ರಶ್ನಿಸಿ ಸಚಿವರಿಂದ ಸ್ಪಷ್ಟನೆ ಬಯಸಿದರು.
ವಿಧಾನಸಭೆಯ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸ್ಪೀಕರ್ ಯು ಟಿ ಖಾದರ್, ತನ್ನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಫೆಬ್ರವರಿ 25 ರಿಂದ ನಾಪತ್ತೆಯಾಗಿರುವ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದ ತನಿಖೆ ಏನಾಯಿತು? ಆತನ ಪತ್ತೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂದು ಪ್ರಶ್ನಿಸಿದರಲ್ಲದೆ ದಿಗಂತ್ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ಸೂಚಿಸಿದರು. ಈ ವೇಳೆ ರಾಜ್ಯ ಗೃಹಸಚಿವರ ಅನುಪಸ್ಥಿತಿಯಲ್ಲಿ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, 17 ವರ್ಷದ ದ್ವಿತೀಯ ಪಿಯು ವಿದ್ಯಾರ್ಥಿ ದಿಗಂತ್ ಫೆಬ್ರವರಿ 25ರಂದು ರಾತ್ರಿ 7:30ರ ಸುಮಾರಿಗೆ ದೇವಸ್ಥಾನಕ್ಕೆಂದು ಮನೆಯಿಂದ ಹೋದವ ಬಳಿಕ ನಾಪತ್ತೆಯಾಗಿದ್ದಾನೆ. ಆತನ ಮೊಬೈಲ್ ಫೆÇೀನ್ ಮತ್ತು ಚಪ್ಪಲಿ ಮನೆಯಿಂದ 200 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಬಾಲಕನ ಪತ್ತೆಗಾಗಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಏಳು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.
ದಿಗಂತ್ ಮೊಬೈಲ್ ಫೆÇೀನ್ ಟ್ರೇಸ್ ಮಾಡಲಾಗುತ್ತಿದೆ. ಸದ್ಯ ಯಾವುದೇ ಮಾಹಿತಿ ಸಿಕ್ಕಿಲ್ಲ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಶೀಘ್ರವಾಗಿ ಪತ್ತೆ ಹಚ್ಚಲಾಗುವುದು. ವಿದ್ಯಾರ್ಥಿಗಳ ಪೆÇೀಷಕರು ಆತಂಕ ಪಡುವ ಅಗತ್ಯ ಇಲ್ಲ ಎಂದರು. ಎಲ್ಲಾ ಆಯಾಮಗಳಲ್ಲಿ ತನಿಖೆ ಕೇಂದ್ರೀಕರಿಸಿ ವಿದ್ಯಾರ್ಥಿ ಪತ್ತೆಗೆ ಶೀಘ್ರ ಕ್ರಮಕೈಗೊಳ್ಳುವಂತೆ ಸ್ಪೀಕರ್ ಸರಕಾರಕ್ಕೆ ಸೂಚಿಸಿದರು.
0 comments:
Post a Comment