ಬಂಟ್ವಾಳ, ಮಾರ್ಚ್ 24, 2025 (ಕರಾವಳಿ ಟೈಮ್ಸ್) : ಇಲ್ಲಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ ಸಿ ರೋಡು ಪದ್ಮ ಕಾಂಪ್ಲೆಕ್ಸ್ ಬಳಿ ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಬಂಧಿತ ಆರೋಪಿಗಳನ್ನು ಮಟ್ಕಾ ಚೀಟಿ ಬರೆಯುತ್ತಿದ್ದ ದಿನೇಶ್ (46) ಹಾಗೂ ಮಟ್ಕಾ ಚೀಟಿ ಪಡೆಯುತ್ತಿದ್ದ ದೀಕ್ಷಿತ್ (30) ಎಂದು ಹೆಸರಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ನಗರ ಪೊಲೀಸರು ಈ ದಾಳಿ ನಡೆಸಿದ್ದು, ದಾಳಿ ವೇಳೆ ಕೃತ್ಯಕ್ಕೆ ಬಳಸುತ್ತಿದ್ದ ಸಾಮಾಗ್ರಿಗಳು ಹಾಗೂ ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment