ಬಂಟ್ವಾಳ, ಮಾರ್ಚ್ 27, 2025 (ಕರಾವಳಿ ಟೈಮ್ಸ್) : ಕೇಪು ಗ್ರಾಮದ ಅಡ್ಯನಡ್ಕ ಪೆಟ್ರೋಲ್ ಪಂಪ್ ಬಳಿ ನಡೆಯುತ್ತಿದ್ದ ಮಟ್ಕಾ ಚೀಟಿ ಅಡ್ಡೆಗೆ ದಾಳಿ ನಡೆಸಿದ ವಿಟ್ಲ ಪೊಲೀಸರು ಇಬ್ಬರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಗಳನ್ನು ಅಶೋಕ ಹಾಗೂ ಗಿರೀಶ ಎಂದು ಹೆಸರಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಟ್ಲ ಠಾಣಾ ಪಿಎಸ್ಸಯ ಕೌಶಿಕ್ ಬಿ ಸಿ ಅವರ ನೇತೃತ್ವದ ಪೊಲೀಸರು ಕೃತ್ಯಕ್ಕೆ ಬಳಸುತ್ತಿದ್ದ ಸಾಮಾಗ್ರಿಗಳು ಹಾಗೂ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment