ಬಂಟ್ವಾಳ, ಮಾರ್ಚ್ 21, 2025 (ಕರಾವಳಿ ಟೈಮ್ಸ್) : ಮನೆಯಂಗಳದಲ್ಲಿ ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನರಿಕೊಂಬು ಗ್ರಾಮದ ನಾಟಿ ಎಂಬಲ್ಲಿ ಗುರುವಾರ ಮಧ್ಯಾಹ್ನದ ವೇಳೆಗೆ ಸಂಭವಿಸಿದೆ.
ಮೃತರನ್ನು ಇಲ್ಲಿನ ನಿವಾಸಿ ಪೂವಪ್ಪ ಎಂದು ಹೆಸರಿಸಲಾಗಿದೆ. ಇವರು ಮನೆಯ ಹೊರಗಡೆ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ವೈದ್ಯರ ಸೂಚನೆ ಮೇರೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಹೋದರ ವಾಮನ ಮೂಲ್ಯ ಅವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment