ಬಂಟ್ವಾಳ, ಮಾರ್ಚ್ 24, 2025 (ಕರಾವಳಿ ಟೈಮ್ಸ್) : ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರೊಂದು ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಸಂಚರಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಮತ್ತೆ ರಸ್ತೆ ವಿಭಜಕದ ಮೇಲೆ ಉರುಳಿ ಬಿದ್ದು ಕಾರಿನಲ್ಲಿದ್ದ ಸಹಪ್ರಯಾಣಿಕ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ತುಂಬೆ ಗ್ರಾಮದ ರಾಮಲ್ ಕಟ್ಟೆ ಎಂಬಲ್ಲಿ ಶನಿವಾರ ಮಧ್ಯಾಹ್ನ ವೇಳೆ ಸಂಭವಿಸಿರುವ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಕಾರು ಪ್ರಯಾಣಿಕನನ್ನು ಜಿ ಎ ಗಫೂರ್ ಎಂದು ಹೆಸರಿಸಲಾಗಿದೆ. ಅಬ್ದುಲ್ ರಹಿಮಾನ್ ಎಂಬವರು ಚಲಾಯಿಸಿಕೊಂಡು ಬಂದ ಕಾರು ರಾಮಲ್ ಕಟ್ಟೆ ಎಂಬಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಹೆದ್ದಾರಿಯ ಇನ್ನೊಂದು ಬದಿಯಲ್ಲಿ ನಾಗಪ್ಪ ನಾಗಾವಿ ಎಂಬವರು ಚಲಾಯಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಮತ್ತೆ ರಸ್ತೆ ವಿಭಕದ ಮೇಳೆ ಉರುಳಿ ಬಿದ್ದಿದೆ.
ಅಪಘಾತದಿಂದ ಕಾರಿನಲ್ಲಿದ್ದ ಸಹಪ್ರಯಾಣಿಕ ಜಿ ಎ ಗಫೂರ್ ಎಂಬವರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.
0 comments:
Post a Comment