ಬಂಟ್ವಾಳ, ಮಾರ್ಚ್ 24, 2025 (ಕರಾವಳಿ ಟೈಮ್ಸ್) : ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಪಿಕಪ್ ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ತುಂಬೆ ಗ್ರಾಮದ ತುಂಬೆ ವೈಶಾಲಿ ವೈನ್ಸ್ ಎದುರು ಭಾಗದಲ್ಲಿ ಶನಿವಾರ ರಾತ್ರಿ ವೇಳೆ ಸಂಭವಿಸಿದೆ.
ಮೃತ ಪಾದಚಾರಿ ವ್ಯಕ್ತಿಯನ್ನು ಮಹಾಬಲ ಎಂದು ಹೆಸರಿಸಲಾಗಿದೆ. ಇವರು ತುಂಬೆ ವೈನ್ ಶಾಪ್ ಬಳಿ ಹೆದ್ದಾರಿ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಬಂದ ಮನೀಶ್ ಎಂಬವರು ಚಲಾಯಿಸಿಕೊಂಡು ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಮಹಾಬಲ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆದರೆ ಚಿಕಿತ್ಸೆ ಫಲಿಸದೆ ಅವರು ತಡ ರಾತ್ರಿ ವೇಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment