ಬಂಟ್ವಾಳ, ಮಾರ್ಚ್ 22, 2025 (ಕರಾವಳಿ ಟೈಮ್ಸ್) : ಗಂಟಲು ಕ್ಯಾನ್ಸರಿನಿಂದ ಬಳಲುತ್ತಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕಾವಳಪಡೂರು ಗ್ರಾಮದ ಕಂಗಿತ್ಲು ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.
ಮೃತರನ್ನು ಇಲ್ಲಿನ ನಿವಾಸಿ ಅಣ್ಣು ಮೂಲ್ಯ ಎಂದು ಹೆಸರಿಸಲಾಗಿದೆ. ಇವರು ಕಳೆದೊಂದು ವರ್ಷದಿಂದ ಗಂಟಲು ಕ್ಯಾನ್ಸರಿನಿಂದ ಬಳಲುತ್ತಿದ್ದು, ಯಾವುದೇ ಆಹಾರ ಬಾಯಿಗೆ ಹಿಡಿಸುತ್ತಿರಲಿಲ್ಲ ಅಲ್ಲದೆ ಚಿಕಿತ್ಸೆಗಾಗಿ ಬಹಳಷ್ಟು ಖರ್ಚು ಮಾಡಲಾಗುತ್ತಿದೆ ಎಂಬ ಚಿಂತೆಯಿಂದ ಬುಧವಾರ ಬೆಳಿಗ್ಗೆ ಮನೆಯ ಶೌಚಾಲಯದಲ್ಲಿ ವಿಷ ಸೇವಿಸಿದ್ದರು. ಈ ಬಗ್ಗೆ ತಕ್ಷಣ ಅವರನ್ನು ಅವರ ಪುತ್ರ ಪ್ರಶಾಂತ್ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿಂದ ವೈದ್ಯರ ಸಲಹೆ ಮೇರೆಗೆ ಮಂಗಳೂರು ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಕ್ಯಾನ್ಸರ್ ರೋಗದ ಚಿಕಿತ್ಸೆಯ ಬಗ್ಗೆ ಜಿಗುಪ್ಸೆಗೊಂಡು ಅವರ ಈ ಕೃತ್ಯ ಎಸಗಿದ್ದಾರೆ ಎಂದು ಪುತ್ರ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment