ಬಂಟ್ವಾಳ, ಎಪ್ರಿಲ್ 08, 2025 (ಕರಾವಳಿ ಟೈಮ್ಸ್) : ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವ್ಯಕ್ತಿ ಆಸ್ಪತ್ರೆಗೆ ದಾಖಲಾದ ಘಟನೆ ಬಿ ಮೂಡ ಗ್ರಾಮದ ಬಿ ಸಿ ರೋಡು ಪೆಟ್ರೋಲ್ ಪಂಪ್ ಬಳಿ ಶನಿವಾರ ಸಂಭವಿಸಿದ್ದು, ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಗೊಂಡ ಪಾದಚಾರಿ ವ್ಯಕ್ತಿಯನ್ನು ವಸಂತ ಪೂಜಾರಿ ಎಂದು ಹೆಸರಿಸಲಾಗಿದೆ. ಇವರು ಶನಿವಾರ ಅಪರಾಹ್ನ ವೇಳೆ ಬಿ ಸಿ ರೋಡ್ ಪಂಪ್ ಎದುರು ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಬಿ ಸಿ ರೋಡು ಕಡೆಗೆ ಮೊಹಮ್ಮದ್ ಮುಜೀಬ್ ರೆಹಮಾನ್ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ರಸ್ತೆಗೆ ಬಿದ್ದ ವಸಂತ ಪೂಜಾರಿ ತಲೆಯ ಹಿಂಬದಿ ಹಾಗೂ ಕಾಲಿಗೆ ಗಾಯಗಳಾಗಿವೆ. ತಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪಡೀಲ್ ಜನಪ್ರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ವಸಂತ ಅವರ ಪರಿಚಯದ ಗೂಡಿನಬಳಿ ನಿವಾಸಿ ಅಲ್ ಅಮೀನ್ ಅವರು ನೀಡಿದ ದೂರಿನ ಮೇರೆಗೆ ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment