ಮಂಗಳೂರು, ಎಪ್ರಿಲ್ 01, 2025 (ಕರಾವಳಿ ಟೈಮ್ಸ್) : ಜಿಲ್ಲಾ ಎಸ್ಪಿ ಯತೀಶ್ ಎನ್ ಸಹಿತ ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ಘಟಕದ 8 ಮಂದಿ ಪೊಲೀಸ್ ಅಧಿಕಾರಿ-ಸಿಬ್ಬಂದಿಗಳಿಗೆ ಕಳೆದ ಮೂರು ವರ್ಷಗಳ ಅವಧಿಯ ಅಂದರೆ 2022, 2023 ಹಾಗೂ 2024ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ.
2022ನೇ ಸಾಲಿನಲ್ಲಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿ ಎಸ್ ವಿಜಯ ಪ್ರಸಾದ್, ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮಿನ ವೈರ್ ಲೆಸ್ ವಿಭಾಗದ ಪೊಲೀಸ್ ಇನ್ಸ್ ಪೆಕ್ಟರ್ ಪದ್ಮಯ ರಾಣೆ, ವಿಟ್ಲ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ಇ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಎಎಸ್ಸೈ ಆಜಡ್ಕ ಪರಮೇಶ್ವರ ಗೌಡ, 2023ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯತೀಶ್ ಎನ್, ಪುತ್ತೂರು ನಗರ ಪೊಲೀಸ್ ಠಾಣಾ ಮುಖ್ಯ ಪೇದೆ ಅದ್ರಾಮ ಎನ್, 2024ನೇ ಸಾಲಿನಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ ಬಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಠಾಣಾ ಹೆಡ್ ಕಾನ್ಸ್‍ಟೇಬಲ್ ಪ್ರವೀಣ್ ಎಂ ಅವರು ಮುಖ್ಯಮಂತ್ರಿ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ.
ಪದಕ ಪ್ರಧಾನ ಸಮಾರಂಭವು ಎಪ್ರಿಲ್ 2 ರಂದು ಬುಧವಾರ ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನ ಕೋರಮಂಗಳ ಕೆ.ಎಸ್.ಆರ್.ಪಿ ಪರೇಡ್ ಗ್ರೌಂಡ್ ಇಲ್ಲಿ ನಡೆಯಲಿದೆ.
0 comments:
Post a Comment