ಮಂಗಳೂರು, ಎಪ್ರಿಲ್ 09, 2025 (ಕರಾವಳಿ ಟೈಮ್ಸ್) : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಗಳಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಂಗಳವಾರ ಸನ್ಮಾನಿಸಿ ಗೌರವಿಸಿದರು.
ವಾಣಿಜ್ಯ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದ ಕೆನರಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ದೀಪಶ್ರೀ ಹಾಗೂ ವಿಜ್ಞಾನ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಗಳಿಸಿದ ಎಕ್ಸ್‍ಪರ್ಟ್ ಪಿಯು ಕಾಲೇಜಿನ ಅಮೂಲ್ಯ ಕಾಮತ್ ಅವರನ್ನು ಡೀಸಿ ಅವರು ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಸಿಇಒ ಡಾ ಕೆ ಆನಂದ್, ಅಮೂಲ್ಯ ಅವರ ಹೆತ್ತವರಾದ ಡಾ ದಿನೇಶ್ ಕಾಮತ್ ಮತ್ತು ಡಾ ಅನುರಾಧಾ ಕಾಮತ್, ದೀಪಶ್ರೀ ಅವರ ಹೆತ್ತವರಾದ ಅಶೋಕ್ ಎಸ್ ಮತ್ತು ಸುಮಾ, ಪದವಿಪೂರ್ವ ಶಿಕ್ಷಣ ಇಲಾಖಾ ಉಪ ನಿರ್ದೇಶಕ ಶ್ರೀಧರ್ ಎಚ್ ಜಿ, ಇಲಾಖಾ ಶಾಖಾಧಿಕಾರಿ ನಿತಿನ್ ಶೆಟ್ಟಿ, ಕೆನರಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಲತಾ ಮಹೇಶ್ವರಿ, ಎಕ್ಸ್‍ಪರ್ಟ್ ಪಿಯು ಕಾಲೇಜು ಪ್ರಾಂಶುಪಾಲ ರಾಮಚಂದ್ರ ಭಟ್ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment