ಬಂಟ್ವಾಳ, ಎಪ್ರಿಲ್ 03, 2025 (ಕರಾವಳಿ ಟೈಮ್ಸ್) : ಬಿ ಸಿ ರೋಡಿನಲ್ಲಿರುವ ಬಂಟ್ವಾಳ ಆಡಳಿತ ಸೌಧಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಲ್ಲಿನ ತಾಲೂಕು ಕಛೇರಿಯಲ್ಲಿ ಜಮೀನು ದಾಖಲೆಗಳು, ಸರ್ವೆ ಇಲಾಖೆಯಲ್ಲಿನ ಕಡತಗಳ ಸಮಪರ್ಕ ವಿಲೇವಾರಿ ಆಗದೆ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನಲೆಯಲ್ಲಿ ಡೀಸಿ ಈ ದಿಢೀರ್ ಭೇಟಿ ನೀಡಿ ಅಧಿಕಾರಿ-ಸಿಬ್ಬಂದಿಗಳಿಗೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ.
ಇಲ್ಲಿನ ರೆಕಾರ್ಡ್ ರೂಮ್, ಸರ್ವೆ ಇಲಾಖಾ ಕಚೇರಿ ಸಹಿತ ವಿವಿಧ ಕಚೇರಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮುಹಿಲನ್ ಅವರು ಕಡತಗಳನ್ನು ಪರಿಶೀಲನೆ ನಡೆಸಿದರಲ್ಲದೆ, ಯಾವುದೇ ಕಾರಣಕ್ಕೂ ಕೆಲಸ-ಕಾರ್ಯ ವಿಳಂಬ ಮಾಡದೆ ಕ್ಲಪ್ತ ಸಮಯದಲ್ಲಿ ಮಾಡಿಕೊಡುವಂತೆ ಸೂಚಿಸಿದರು.
ತಹಶೀಲ್ದಾರ್ ಅರ್ಚನಾ ಭಟ್, ಸರ್ವೇ ಅಧಿಕಾರಿಗಳಾದ ನಿಸಾರ್ ಅಹ್ಮದ್, ಪ್ರಸಾದಿನಿ ಸಹಿತ ವಿವಿಧ ವಿಭಾಗಗಳ ಅಧಿಕಾರಿ-ಸಿಬ್ಬಂದಿಗಳನ್ನು ಪ್ರಶ್ನಿಸಿದ ಜಿಲ್ಲಾಧಿಕಾರಿ ಸೂಕ್ತ ಮಾಹಿತಿ ಪಡೆದುಕೊಂಡರು.
0 comments:
Post a Comment