ಮಂಗಳೂರು, ಎಪ್ರಿಲ್ 13, 2025 (ಕರಾವಳಿ ಟೈಮ್ಸ್) : ಮುಂದಿನ ವರ್ಷ ನಾಡ ಹಬ್ಬ ಮೈಸೂರು ದಸರಾದ ಕ್ರೀಡಾಕೂಟದಲ್ಲಿ ಕಂಬಳ ಆಯೋಜಿಸುತ್ತೇವೆ. ಮುಂದೆ ಇದು ಪರಂಪರೆಯಾಗಿ ಉಳಿದು ಮುಂದುವರಿಯಬೇಕು. ಈ ಕ್ರೀಡೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಬೇಕಿದೆ. ಪಕ್ಷ, ಭೇದ, ಜಾತಿ ಮರೆತು ಈ ಕ್ರೀಡೆಯನ್ನು ಬೆಳೆಸೋಣ, ಪೆÇ್ರೀತ್ಸಾಹಿಸೋಣ. ಇದಕ್ಕೆ ನಾನು, ನಮ್ಮ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಘೋಷಿಸಿದರು.
ಶನಿವಾರ (ಎಪ್ರಿಲ್ 12) ಸಂಜೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಗುರುಪುರ ಮಾಣಿಬೆಟ್ಟು ಗುತ್ತಿನ ಗದ್ದೆಯಲ್ಲಿ ನಡೆದ 2ನೇ ವರ್ಷದ ಹೊನಲು ಬೆಳಕಿನ ಮೂಳೂರು-ಅಡ್ಡೂರು ಜೋಡುಕರೆ ಕಂಬಳ “ಗುರುಪುರ ಕಂಬಳೋತ್ಸವ”ದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದ ಅವರು, ದಕ್ಷಿಣ ಕನ್ನಡದ ಧಾರ್ಮಿಕ ಚಿಂತನೆಗಳ ಮೇಲೆ ಜಗತ್ತಿಗೇ ಅಪಾರ ನಂಬಿಕೆ ಇದೆ. ಸೋಲುವುದು ಹೇಗೆಂದು ಕಲಿಯದಿದ್ದರೆ ಗೆಲ್ಲಲು ಸಾಧ್ಯವಿಲ್ಲ. ಹಾಗೇ ಈ ಕಂಬಳ ಕ್ರೀಡೆಯಲ್ಲಿ ಹೃದಯವಂತಿಕೆ ಮುಖ್ಯವಾಗಿರಲಿ. ಕಂಬಳ ಕ್ರೀಡೆಯಿಂದ ನಮ್ಮ ಸಂಪ್ರದಾಯ- ಪರಂಪರೆ ಬೆಳೆಯುತ್ತಿದೆ. ನಮ್ಮ ಸರ್ಕಾರ ಇದಕ್ಕೆ ಪೆÇ್ರೀತ್ಸಾಹ ನೀಡುತ್ತದೆ ಎಂದರು.
ಸಾಮರಸ್ಯದ ಪ್ರತೀಕವಾಗಿರುವ ಕಂಬಳೋತ್ಸವದಲ್ಲಿ ಭಾಗವಹಿಸಿ ತುಂಬಾ ಖುಷಿ ಪಟ್ಟಿದ್ದೇನೆ. ಇಲ್ಲಿನ ಜನ ಕಂಬಳದ ಕೋಣಗಳನ್ನು ಮಕ್ಕಳಿಗಿಂತ ಜಾಸ್ತಿಯಾಗಿ ಪ್ರೀತಿಸುತ್ತಾರೆ. ಇಲ್ಲಿನ ಜನರ ಪ್ರೀತಿಗೆ ನನ್ನ ಪ್ರೀತಿಯ ಕೃತಜ್ಞತೆಗಳು ಎಂದು ಡಿಸಿಎಂ ಶಿವಕುಮಾರ್ ಹೇಳಿದರು.
0 comments:
Post a Comment