ಬಂಟ್ವಾಳ, ಎಪ್ರಿಲ್ 13, 2025 (ಕರಾವಳಿ ಟೈಮ್ಸ್) : ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಪರಿಣಾಮ ಪಾದಚಾರಿ ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಬಿ ಸಿ ರೋಡು ಸಮೀಪದ ಕೈಕಂಬ ಜಂಕ್ಷನ್ ಬಳಿ ಶನಿವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.
ಗಾಯಗೊಂಡ ಪಾದಚಾರಿಯನ್ನು ಮೊಹಮ್ಮದ್ ನವಾಫ್ ಹಾಗೂ ಬೈಕ್ ಸವಾರನನ್ನು ಮುಹಮ್ಮದ್ ಅಜ್ಮಾನ್ ಎಂದು ಹೆಸರಿಸಲಾಗಿದೆ. ಮೊಹಮ್ಮದ್ ನವಾಫ್ ಕೈಕಂಬದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಬಿ ಸಿ ರೋಡು ಕಡೆಗೆ ಬೈಕ್ ಚಲಾಯಿಸಿಕೊಂಡು ಬಂದ ಅಜ್ಮಾನ್ ಅವರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಘಟನೆಯಿಂದ ಇಬ್ಬರಿಗೂ ಗಾಯಗಳಾಗಿವೆ. ಈ ಬಗ್ಗೆ ಶಾಂತಿಅಂಗಡಿ ನಿವಾಸಿ ನಜೀನ್ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment