ಬಂಟ್ವಾಳ, ಎಪ್ರಿಲ್ 13, 2025 (ಕರಾವಳಿ ಟೈಮ್ಸ್) : ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಗಾಯಗೊಂಡ ಘಟನೆ ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿ ಶುಕ್ರವಾರ ಸಂಭವಿಸಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಗೊಂಡ ಮಹಿಳೆಯನ್ನು ಯಶೋಧ (51) ಎಂದು ಹೆಸರಿಸಲಾಗಿದೆ. ಇವರು ಮಿತ್ತೂರು ಕಡೆಯಿಂದ ನಡೆದುಕೊಂಡು ಬಂದು ರಸ್ತೆ ದಾಟುತ್ತಿದ್ದ ವೇಳೆ ಸೂರ್ಯ ಕಡೆಯಿಂದ ಮಿತ್ತೂರು ಕಡೆಗೆ ಧಾವಿಸಿ ಬಂದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ರಸ್ತೆಗೆ ಬಿದ್ದ ಯಶೋಧ ಅವರ ಹಣೆ, ಬೆನ್ನು ಹಾಗೂ ಬಲಗೈಗೆ ಗಾಯವಾಗಿದ್ದು, ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment