ಬಂಟ್ವಾಳ, ಎಪ್ರಿಲ್ 14, 2025 (ಕರಾವಳಿ ಟೈಮ್ಸ್) : ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಕೋಡಿಮಜಲು ಅವರ ವಿಶೇಷ ಮುತುವರ್ಜಿಯಲ್ಲಿ ವಿವಿಧ ಇಲಾಖೆಗಳು ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಸುಮಾರು 19 ಲಕ್ಷ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕವಾಗಿ ಹೈಟೆಕ್ ಮಾದರಿಯಲ್ಲಿ ನವೀಕರಣಗೊಂಡ ನರಿಕೊಂಬು ಗ್ರಾಮದ ಮಾರುತಿ ನಗರದ ವೀರಮಾರುತಿ ಅಂಗನವಾಡಿ ಕೇಂದ್ರದ ಕಟ್ಟಡ ಉದ್ಘಾಟನಾ ಕಾರ್ಯಕ್ರಮವು ಎಪ್ರಿಲ್ 18 ರಂದು ಶುಕ್ರವಾರ ಸಂಜೆ 5 ಗಂಟೆಗೆ ನೆರವೇರಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಪಂಚಾಯತ್, ನರಿಕೊಂಬು ಗ್ರಾಮ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬಂಟ್ವಾಳ ಮತ್ತು ಶಿಶು ಅಭಿವೃದ್ದಿ ಯೋಜನೆ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನರೇಗಾ, ಗ್ರಾಮ ಪಂಚಾಯತ್ ಮತ್ತು ಮಂಗಳೂರು ಎಂ ಆರ್ ಪಿ ಎಲ್ ಇದರ ಸಿ ಎಸ್ ಆರ್ ಅನುದಾನದಲ್ಲಿ ನಿರ್ಮಾಣಗೊಂಡ ಈ ಹೈಟೆಕ್ ಅಂಗನವಾಡಿ ಕಟ್ಟಡವನ್ನು ಸಂಜೆ 5 ಗಂಟೆಗೆ ವಿಟ್ಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ ರುಕ್ಮಯ್ಯ ಪೂಜಾರಿ ಉದ್ಘಾಟಿಸುವರು. ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದ ಬ್ರಿಜೇಶ್ ಚೌಟ, ಮಾಜಿ ಸಚಿವ ಬಿ ರಮಾನಾಥ ರೈ ಸಹಿತ ಹಲವು ಗಣ್ಯರು, ಇಲಾಖಾಧಿಕಾರಿಗಳು ಭಾಗವಹಿಸಲಿದ್ದಾರೆ. ಇದೇ ವೇಳೆ ಸದಾಶಿವ ಕುಲಾಲ್ ಮಾರುತಿ ನಗರ, ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಶೋಭಾ, ಗುತ್ತಿಗೆದಾರ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ನಿವೃತ್ತ ಅಂಗನವಾಡಿ ಶಿಕ್ಷಕಿ ಹಾಗೂ ಬಂಟ್ವಾಳ ತಾ ಪಂ ಮಾಜಿ ಅಧ್ಯಕ್ಷೆ ಸುನೀತಾ ಪದ್ಮನಾಭ ಹಾಗೂ ಕು ಪ್ರಮೀಳಾ ಮಾರುತಿನಗರ ಅವರನ್ನು ಗೌರವಿಸಲಾಗುವುದು.
ಈ ಪ್ರಯುಕ್ತ ಸಂಜೆ 4 ಗಂಟೆಗೆ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ, 5 ಗಂಟೆಗೆ ಸಭಾ ಕಾರ್ಯಕ್ರಮ, ರಾತ್ರಿ 8 ಗಂಟೆಗೆ ಅಂಗನವಾಡಿ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ, 9 ಗಂಟೆಗೆ ಮಾರುತಿನಗರ ಲಾಸ್ಯ ನಾಟ್ಯ ನಿಕೇತನ ತಂಡದಿಂದ ಭರತ ನಾಟ್ಯ, 9.30ಕ್ಕೆ ನರಿಕೊಂಬು ನಿಶಾನಿ ಡ್ಯಾನ್ಸ್ ಗ್ರೂಪ್ ಇವರಿಂದ ನೃತ್ಯ ಕಾರ್ಯಕ್ರಮ, ರಾತ್ರಿ 10 ಗಂಟೆಗೆ ರವಿಚಂದ್ರ ಮಾಣಿಮಜಲು ಇವರ ನೇತೃತ್ವದ ತಂಡದಿಂದ ಸಂಗೀತ ರಸಮಂಜರಿ, 10.30ಕ್ಕೆ ಸ್ತ್ರೀ ಶಕ್ತಿ ಹಾಗೂ ಮಕ್ಕಳ ಪೋಷಕರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ ಎಂದು ವೀರಮಾರುತಿ ಪ್ರಕಟಣೆ ತಿಳಿಸಿದೆ.
0 comments:
Post a Comment