ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟ : ಶೇಕಡಾ 73.45 ಮಂದಿ ವಿದ್ಯಾರ್ಥಿಗಳು ಪಾಸ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಘೋಷಣೆ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ, ದ.ಕ. ಜಿಲ್ಲೆ ದ್ವಿತೀಯ - Karavali Times ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟ : ಶೇಕಡಾ 73.45 ಮಂದಿ ವಿದ್ಯಾರ್ಥಿಗಳು ಪಾಸ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಘೋಷಣೆ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ, ದ.ಕ. ಜಿಲ್ಲೆ ದ್ವಿತೀಯ - Karavali Times

728x90

8 April 2025

ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟ : ಶೇಕಡಾ 73.45 ಮಂದಿ ವಿದ್ಯಾರ್ಥಿಗಳು ಪಾಸ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಘೋಷಣೆ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ, ದ.ಕ. ಜಿಲ್ಲೆ ದ್ವಿತೀಯ

ಬೆಂಗಳೂರು, ಎಪ್ರಿಲ್ 08, 2025 (ಕರಾವಳಿ ಟೈಮ್ಸ್) : ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು. ಶೇ 73.45 ಮಂದಿ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಘೋಷಣೆ ಮಾಡಿದ್ದಾರೆ. ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ. ದ.ಕ. ಜಿಲ್ಲೆ ದ್ವಿತೀಯ. ಮಧ್ಯಾಹ್ನ 1.30 ಗಂಟೆ ಬಳಿಕ ವೆಬ್ ಸೈಟಿನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಉಡುಪಿ ಜಿಲ್ಲೆ 93.90 ಶೇಕಡಾ ಫಲಿತಾಂಶ ದಾಖಲಿಸಿದರೆ, ದಕ್ಷಿಣ ಕನ್ನಡ ಜಿಲ್ಲೆ 93.57 ಶೇಕಡಾ ಫಲಿತಾಂಶ ದಾಖಲಿಸಿದೆ. ಶೇ 85.36 ಫಲಿತಾಂಶ ದಾಖಲಿಸಿರುವ ಬೆಂಗಳೂರು ದಕ್ಷಿಣ 3ನೇ ಸ್ಥಾನ ಪಡೆದಿದ್ದು, ಯಾದಗಿರಿ ಜಿಲ್ಲೆ 48.45 ಶೇಕಡಾ ಫಲಿತಾಂಶ ದಾಖಲಿಸಿ ಕೊನೆ ಸ್ಥಾನದಲ್ಲಿದೆ.

ಈ ಬಾರಿ 6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ ಈ ಪೈಕಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. 

ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್‍ಪರ್ಟ್ ಕಾಲೇಜಿನ ಶ್ರೇಯಾ ಅವರು 597 ಅಂಕ ಪಡೆದು ಮೊದಲ ಸ್ಥಾನ ಪಡೆದರೆ, ಕಲಾ ವಿಭಾಗದಲ್ಲಿ ಬಳ್ಳಾರಿಯ ಇಂದೂ ಪಿಯು ಕಾಲೇಜಿನ ಸಂಜನಾ ಬಾಯಿ 597 ಅಂಕ ಗಳಿಸಿ ಮೊದಲ ಸ್ಥಾನ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಾಶ್ರೀ 599 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.

1,00,571 ಮಂದಿ ಉನ್ನತ ಶ್ರೇಣಿ ಪಡೆದರೆ, 2,78,054 ಮಂದಿ ವಿದ್ಯಾರ್ಥಿಗಳು ದ್ವೀತಿಯ ದರ್ಜೆಯಲ್ಲಿ ಪಾಸ್ ಆಗಿದ್ದಾರೆ. 70969 ಮಂದಿ ದ್ವಿತೀಯ ದರ್ಜೆ ಹಾಗೂ 18845 ಮಂದಿ ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. 

ಮಾರ್ಚ್ 1 ರಿಂದ 20 ರ ವರೆಗೆ ಪಿಯುಸಿ ಪರೀಕ್ಷೆ ನಡೆದಿದ್ದು, 7 ಲಕ್ಷದ 13 ಸಾವಿರದ 862 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟ : ಶೇಕಡಾ 73.45 ಮಂದಿ ವಿದ್ಯಾರ್ಥಿಗಳು ಪಾಸ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಘೋಷಣೆ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ, ದ.ಕ. ಜಿಲ್ಲೆ ದ್ವಿತೀಯ Rating: 5 Reviewed By: karavali Times
Scroll to Top