ಬಂಟ್ವಾಳ, ಎಪ್ರಿಲ್ 10, 2025 (ಕರಾವಳಿ ಟೈಮ್ಸ್) : 2024-25 ರ ಶೈಕ್ಷಣಿಕ ಸಾಲಿನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತುಂಬೆ ಪದವಿಪೂರ್ವ ಕಾಲೇಜು ಶೇಕಡಾ 93 ಫಲಿತಾಂಶ ದಾಖಲಿಸಿದೆ.
ವಿಜ್ಞಾನ ವಿಭಾಗದಲ್ಲಿ 66 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 63 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮೊಹಮ್ಮದ್ ಸಿನಾನ್ 568 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಉಳಿದಂತೆ 11 ಮಂದಿ ಡಿಸ್ಟಿಂಕ್ಶನ್, 46 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 68 ಮಂದಿ ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 63 ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿನಿ ಕು ನಮ್ರತಾ ಅವರು 547 ಅಂಕಗಳೊಂದಿಗೆ ಪ್ರಥಮ ಸ್ಥಾನ ಹಾಗೂ ನಾಲ್ಕು ಡಿಸ್ಟಿಂಕ್ಶನ್, 34 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 15 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿ 6 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದಾರೆ. ವಿದ್ಯಾರ್ಥಿನಿ ಕು ಮೆಹರುನ್ನೀಸಾ 493 ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ ಎಂದು ಕಾಲೇಜು ಪ್ರಾಂಶುಪಾಲ ವಿ ಎಸ್ ಭಟ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
0 comments:
Post a Comment