ಧರ್ಮಸ್ಥಳ, ಎಪ್ರಿಲ್ 17, 2025 (ಕರಾವಳಿ ಟೈಮ್ಸ್) : ಅಕ್ರಮ ಮರಳು ಸಾಗಾಟ ಪ್ರಕರಣ ಬೇಧಿಸಿದ ಧರ್ಮಸ್ಥಳ ಪೊಲೀಸರು ಲಕ್ಷಾಂತರ ರೂಪಾಯಿ ಮೌಲ್ಯದ ಮರಳನ್ನು ವಶಪಡಿಸಿಕೊಂಡ ಘಟನೆ ಪುದುವೆಟ್ಟು ಗ್ರಾಮದ ಬೊಳ್ಮನಾರು ಎಂಬಲ್ಲಿ ಬುಧವಾರ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಧರ್ಮಸ್ಥಳ ಠಾಣಾ ಪಿಎಸ್ಸೈ ಸಮರ್ಥ ಆರ್ ಗಾಣಿಗೇರ ಅವರ ನೇತೃತ್ವದ ಪೊಲೀಸರು ಕೆಎ-17ಸಿ-2338 ನೋಂದಣಿ ಸಂಖ್ಯೆಯ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 5.5 ಲಕ್ಷ ರೂಪಾಯಿ ಮೌಲ್ಯದ ಸುಮಾರು 2 ಯುನಿಟ್ ಮರಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಮರಳು ಕಳವು ಪ್ರಕರಣ ದಾಖಲಾಗಿದೆ.
0 comments:
Post a Comment