ಮೂಡುಪಡುಕೋಡಿ : ಕುಕ್ಕರಕೋಡಿ ಲಕ್ಷ್ಮಿ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಡಬ್ಬಿ ಒಡೆದು ಹಣ ಕಳವು - Karavali Times ಮೂಡುಪಡುಕೋಡಿ : ಕುಕ್ಕರಕೋಡಿ ಲಕ್ಷ್ಮಿ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಡಬ್ಬಿ ಒಡೆದು ಹಣ ಕಳವು - Karavali Times

728x90

17 April 2025

ಮೂಡುಪಡುಕೋಡಿ : ಕುಕ್ಕರಕೋಡಿ ಲಕ್ಷ್ಮಿ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಡಬ್ಬಿ ಒಡೆದು ಹಣ ಕಳವು

ಬಂಟ್ವಾಳ, ಎಪ್ರಿಲ್ 17, 2025 (ಕರಾವಳಿ ಟೈಮ್ಸ್) : ದೇವಸ್ಥಾನದ ಕಾಣಿಕೆ ಡಬ್ಬಿ ಒಡೆದು ಹಣ ಎಗರಿಸಿದ ಘಟನೆ ಮೂಡುಪಡುಕೋಡಿ ಗ್ರಾಮದ ಕುಕ್ಕೆರೋಡಿ ಶ್ರೀ ಲಕ್ಷ್ಮಿ ವಿಷ್ಣುಮೂರ್ತಿ ಜಲದುರ್ಗೆ ದೇವಸ್ಥಾನದಲ್ಲಿ ನಡೆದಿದ್ದು ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಈ ಬಗ್ಗೆ ದೇವಸ್ಥಾನದ ಕಾರ್ಯಾಧ್ಯಕ್ಷ ಸುಧೀಂದ್ರ ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದು, ಇಲ್ಲಿನ ದೇವಸ್ಥಾನದ ಮುಂಭಾಗ ರಸ್ತೆ ಬದಿಯಲ್ಲಿ ಅಳವಡಿಸಲಾಗಿರುವ ಕಾಣಿಕೆ ಡಬ್ಬಿಯಲ್ಲಿನ ಹಣವನ್ನು ಪ್ರತಿ ತಿಂಗಳ ಸಂಕ್ರಮಣದಂದು ನಡೆಯುವ ಪೂಜೆಗೆ ಬಳಸಲಾಗುತ್ತಿತ್ತು. ಪ್ರತಿ ತಿಂಗಳು ಈ ಕಾಣಿಕೆ ಡಬ್ಬಿಯಲ್ಲಿ ಸುಮಾರು 5 ಸಾವಿರ ರೂಪಾಯಿ ಸಂಗ್ರಹವಾಗುತ್ತಿತ್ತು. ಈ ತಿಂಗಳ ಪೂಜೆಯ ಸಮಯದಲ್ಲಿ ದೇವಸ್ಥಾನದ ಮುಂಭಾಗದ ಕಾಣಿಕೆ ಡಬ್ಬಿಯನ್ನು ಯಾರೋ ಕಳ್ಳರು ಚಿಲಕದ ಪಿನ್ ತೆಗೆದು ಅದಲ್ಲಿನ ಚಿಲ್ಲರೆ ಹಣವನ್ನು ಹಾಗೇ ಬಿಟ್ಟು ದೊಡ್ಡ ಮೊತ್ತವನ್ನು ಎಗರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಮೂಡುಪಡುಕೋಡಿ : ಕುಕ್ಕರಕೋಡಿ ಲಕ್ಷ್ಮಿ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಡಬ್ಬಿ ಒಡೆದು ಹಣ ಕಳವು Rating: 5 Reviewed By: karavali Times
Scroll to Top